alex Certify ಮನೆ ಕೊಡಿಸುವುದಾಗಿ ಹೇಳಿ ಜನರಿಗೆ ಕೋಟಿ ಕೋಟಿ ವಂಚನೆ; ಫೈನಾನ್ಸ್ ಮಾಲೀಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಕೊಡಿಸುವುದಾಗಿ ಹೇಳಿ ಜನರಿಗೆ ಕೋಟಿ ಕೋಟಿ ವಂಚನೆ; ಫೈನಾನ್ಸ್ ಮಾಲೀಕ ಅರೆಸ್ಟ್

ಗದಗ: ಮನೆ, ನಿವೇಶನಗಳನ್ನು ಕೊಡಿಸುವುದಾಗಿ ಹೇಳಿ ಸಾರ್ವಜನಿಕರಿಂದ ಕೋಟಿ ಕೋಟಿ ಹಣ ಪಡೆದು ವಂಚಿಸಿದ್ದ ಫೈನಾನ್ಸ್ ಮಾಲೀಕನನ್ನು ಬಂಧಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ರಾಜೀವ್ ಗಾಂಧಿ ನಗರ ನಿವಾಸಿ ವಿಜಯ್ ಶಿಂಧೆ ಬಂಧಿತ ಆರೋಪಿ. ಸಣ್ಣಪುಟ್ಟ ವ್ಯಾಪಾರಸ್ಥರು ಸೇರಿದಂತೆ ಹಲವರನ್ನು ವಂಚಿಸಿದ್ದ ವಿಜಯ್ ಶಿಂಧೆ ವಿರುದ್ಧ ದೂರು ದಾಖಲಾಗಿತ್ತು.

ಶ್ರೀ ಪುಟ್ಟರಾಜ ಫೈನಾನ್ಸ್ ಕಾರ್ಪೊರೇಷನ್ ಹೆಸರಲ್ಲಿ ಫೈನಾನ್ಸ್ ನಡೆಸುತ್ತಿದ್ದ ವಿಜಯ್ ಶಿಂಧೆ ಹಲವರಿಗೆ ನಿವೇಶನ, ಮನೆ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ. ಚಿಟ್ ಫಂಡ್, ಬಂಗಾರದ ವ್ಯಾಪಾರ, ಪಿಗ್ಮಿ ಹೆಸರಲ್ಲಿಯೂ ಶಿಂಧೆ ಫೈನಾನ್ಸ್ ನಡೆಸುತ್ತಿದ್ದ. ‌

ತನಗೆ ಎರಡು ವರ್ಷಗಳಿಂದ ಲಾಸ್ ಆಗಿದೆ ಎಂದು ಹೇಳಿಕೊಂಡು ಓಡಾಡುತ್ತಿದ್ದ. ಹಲವರು ಆತನ ವಿರುದ್ಧ ದೂರು ನೀಡಲು ಮುಂದಾಗಿರಲಿಲ್ಲ. ಆದರೆ ವ್ಯಕ್ತಿಯೋರ್ವರು ಈತನ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು. ಇದೀಗ ವಿಜಯ್ ಶಿಂಧೆ ಪೊಲೀಸರ ಅತಿಥಿಯಾಗಿದ್ದಾನೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...