ಬೆಂಗಳೂರು: ರೌಡಿಶೀಟರ್ ಒಬ್ಬ ಮಹಿಳಾ ಹೆಡ್ ಕಾನ್ಸ್ ಟೇಬಲ್ ಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವಿನುತಾ(45) ಇರಿತಕ್ಕೆ ಒಳಗಾದ ಮಹಿಳಾ ಪೊಲೀಸ್. ಆರೋಪಿ ರೌಡಿಶೀಟರ್ ಶೇಕ್ ಶರೀಫ್(25) ಕೃತ್ಯವೆಸಗಿದ್ದಾನೆ. ಈತನ ವಿರುದ್ಧ ಹೆಚ್.ಎ.ಎಲ್. ಠಾಣೆಯಲ್ಲಿ ಕೊಲೆ ಹಾಗೂ ಕೊಲೆ ಪ್ರಕರಣಗಳು ದಾಖಲಾಗಿದ್ದು, ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಮತ್ತೆ ಕೊಲೆಗೆ ಸಂಚುರೂಪಿಸಿರುವುದಾಗಿ ಪೊಲೀಸರಿಗೆ ಮಾಹಿತಿ ಬಂದಿದ್ದು, ಆತನನ್ನು ಠಾಣೆಗೆ ಕರೆದುಕೊಂಡು ಬರಲು ಆಗಸ್ಟ್ 5 ರಂದು ಹೆಡ್ ಕಾನ್ಸ್ ಟೇಬಲ್ ವಿನುತಾ ಮತ್ತು ಸಿಬ್ಬಂದಿ ಹೋಗಿದ್ದಾರೆ. ಆತ ಜ್ಯೋತಿ ನಗರದಿಂದ ರೆಡ್ಡಿಪಾಳ್ಯಕ್ಕೆ ಹೋಗಿರುವ ಮಾಹಿತಿ ಸಿಕ್ಕಿದ್ದು, ರಾತ್ರಿ 9:30ಕ್ಕೆ ಠಾಣೆಗೆ ಕರೆದುಕೊಂಡು ಹೋಗಲು ಪೊಲೀಸ್ ಸಿಬ್ಬಂದಿ ಮುಂದಾದಾಗ ಡ್ರ್ಯಾಗರ್ ನಿಂದ ಇರಿದು ಪರಾರಿಗೆ ಯತ್ನಿಸಿದ್ದಾನೆ. ಸ್ಥಳೀಯರ ನೆರವಿನಿಂದ ಆರೋಪಿಯನ್ನು ಹಿಡಿದು ಪೋಲಿಸ್ ಠಾಣೆಗೆ ಕರೆ ತರಲಾಗಿದೆ. ಗಾಯಗೊಂಡ ಮಹಿಳಾ ಹೆಡ್ ಕಾನ್ಸ್ಟೇಬಲ್ ವಿನುತಾ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದು, ಹೆಚ್.ಎ.ಎಲ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.