
ಮಂಗಳೂರು: ಪೋಲಿಸ್ ಇನ್ಸ್ ಪೆಕ್ಟರ್ ಎದುರೇ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಬಳಿ ಭಾನುವಾರ ಸಂಜೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅನ್ಯಕೋಮಿನ ಯುವಕ ಮತ್ತು ಯುವತಿಯರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಕಾರ್ ತಡೆದ ಯುವಕರ ಗುಂಪು ಯುವಕ, ಯುವತಿಯರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಸ್ಥಳದಲ್ಲಿದ್ದ ಇನ್ಸ್ ಪೆಕ್ಟರ್ ನೈತಿಕ ಪೊಲೀಸ್ ಗಿರಿ ತಡೆದಿದ್ದಾರೆ ಎಂದು ಹೇಳಲಾಗಿದೆ.