ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಹಲವೆಡೆ ಪ್ರತಿಭಟನೆ ನಡೆಸಲಾಗಿದೆ.
ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಂಡೋಪತಂಡವಾಗಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಟೌನ್ ಹಾಲ್ ಬಳಿ ಆಗಮಿಸುತ್ತಿದ್ದಂತೆ ತಂಡಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆಗೆ ಅವಕಾಶ ನೀಡದೆ ಬಿಎಂಟಿಸಿ ಬಸ್ ಗಳಲ್ಲಿ ಕಾರ್ಯಕರ್ತರನ್ನು ಕರೆದೊಯ್ಯಲಾಗಿದ್ದು, ಇದಕ್ಕೆ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗ ಸೇರಿದಂತೆ ಹಲವೆಡೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಹಿತಕರ ಘಟನೆ ನಡೆಯದಂತೆ ಭಾರಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ರಾಜ್ಯದ ಹಲವೆಡೆ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ ಮುಂದುವರೆದಿದೆ.