alex Certify ಕರ್ನಾಟಕ ಬಂದ್: ಪ್ರತಿಭಟನೆಗೆ ಮುಂದಾದ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಬಂದ್: ಪ್ರತಿಭಟನೆಗೆ ಮುಂದಾದ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಹಲವೆಡೆ ಪ್ರತಿಭಟನೆ ನಡೆಸಲಾಗಿದೆ.

ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಂಡೋಪತಂಡವಾಗಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಟೌನ್ ಹಾಲ್ ಬಳಿ ಆಗಮಿಸುತ್ತಿದ್ದಂತೆ ತಂಡಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆಗೆ ಅವಕಾಶ ನೀಡದೆ ಬಿಎಂಟಿಸಿ ಬಸ್ ಗಳಲ್ಲಿ ಕಾರ್ಯಕರ್ತರನ್ನು ಕರೆದೊಯ್ಯಲಾಗಿದ್ದು, ಇದಕ್ಕೆ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗ ಸೇರಿದಂತೆ ಹಲವೆಡೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಹಿತಕರ ಘಟನೆ ನಡೆಯದಂತೆ ಭಾರಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ರಾಜ್ಯದ ಹಲವೆಡೆ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...