ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಳಿಗೇರಿ ಗ್ರಾಮದಲ್ಲಿ ಯುವಕನೊಬ್ಬ ಹುಡುಗಿಯ ಮನೆಗೆ ನುಗ್ಗಿ ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದಾನೆ. ನಂತರ ತಾನೂ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರಕಾಶ ಭಜಂತ್ರಿ ಆತ್ಮಹತ್ಯೆ ಮಾಡಿಕೊಂಡ ಯುವಕ. ತನ್ನ ಮನೆಯ ಸಮೀಪವೇ ವಾಸವಾಗಿರುವ ಹುಡುಗಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಜಾತಿ ಬೇರೆಯಾಗಿದ್ದ ಕಾರಣ ಅಪ್ರಾಪ್ತೆ ಒಪ್ಪಿಕೊಂಡಿರಲಿಲ್ಲ ಎನ್ನಲಾಗಿದೆ.
ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಹುಡುಗಿ ಮನೆಗೆ ನುಗ್ಗಿದ ಪ್ರಕಾಶ ಭಜಂತ್ರಿ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ನಂತರ ತಾನು ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಕೈಗೊಂಡಿದ್ದಾರೆ.