
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ಪೊಲೀಸ್ ಠಾಣೆ ಸಿಬ್ಬಂದಿಯೊಬ್ಬ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ನಡೆದಿದ್ದು, ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಿರುವ ಆರೋಪ ಕೇಳಿಬಂದಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಠಾಣೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಸ್ಥಳೀಯ ಪತ್ರಕರ್ತರೊಬ್ಬರಿಗೆ ಘಟನೆಯ ಬಗ್ಗೆ ವರದಿ ಮಾಡದಂತೆ ಮನವಿ ಮಾಡಲಾಗಿರುವ ವಿಡಿಯೋ ವೈರಲ್ ಆಗಿದೆ ಎನ್ನಲಾಗಿದೆ. ಯುವತಿ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದು, ಗರ್ಭಿಣಿಯಾದ ನಂತರ ಪೊಲೀಸ್ ಸಿಬ್ಬಂದಿ ಕೈಕೊಟ್ಟ ಆರೋಪ ಕೇಳಿಬಂದಿದೆ. ಆದರೆ, ದೂರು ದಾಖಲಾಗಿಲಗಲ. ದೂರು ದಾಖಲಿಸಿದರೆ ಕ್ರಮಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.