alex Certify ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ವೀರದಿಮ್ಮನಹಳ್ಳಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಹಾಗೂ ಆಕೆಯ ಗೆಳೆಯನನ್ನು ಪೊಲೀಸರು ಬಂಧಿಸಿದ್ದಾರೆ.

ಏಪ್ರಿಲ್ 20 ರಂದು ಗೋಪನಹಳ್ಳಿ ಮತ್ತು ಗರಣಿ ಕ್ರಾಸ್ ನಡುವೆ ಗೋಪಾಲನಾಯ್ಕ್ ನನ್ನು ಹೊಡೆದು ಕತ್ತು ಹಿಸುಕಿ ಕೊಲೆ ಮಾಡಿದ ಪತ್ನಿ ಹಾಗೂ ಆಕೆಯ ಗೆಳೆಯ ರಾಜಶೇಖರ್ ಬೈಕ್ ನಲ್ಲಿ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ತೆಗೆದುಕೊಂಡು ಬಂದು ಮೂರ್ಛೆ ರೋಗದಿಂದ ಮೃತಪಟ್ಟಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದರು.

ಮರಣೋತ್ತರ ಪರೀಕ್ಷೆ ವರದಿ ಆಧರಿಸಿ ಮೃತ ಗೋಪಾಲನಾಯ್ಕ್ ಲಕ್ಷ್ಮೀಬಾಯಿ ದೂರು ನೀಡಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪತ್ನಿಯ ಅಚಾತುರ್ಯದಿಂದ ಪತಿ ಮೃತಪಟ್ಟು 9 ಮತ್ತು 6 ವರ್ಷದ ಇಬ್ಬರು ಗಂಡು ಮಕ್ಕಳು ಅನಾಥರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...