
ಪೊಲೀಸ್ ಅಧಿಕಾರಿಯೊಬ್ಬರು ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತ್ರಿಶೂರ್ ನ ವಡಕ್ಕಂಚೇರಿ ಬಳಿ ನಡೆದಿದೆ.
ಮೃತರನ್ನು 52 ವರ್ಷದ ಸಿಪಿಒ ರಮೇಶ್ ಬಾಬು ಎಂದು ಗುರುತಿಸಲಾಗಿದೆ. ರಮೇಶ್ ಬಾಬು ಅವರನ್ನು ಪೊಲೀಸ್ ಕಂಟ್ರೋಲ್ ರೂಂ ಗೆ ನಿಯೋಜಿಸಲಾಗಿತ್ತು. ಆದರೆ ಇದ್ದಕ್ಕಿದ್ದಂತೆ ತಡರಾತ್ರಿ ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.