ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಸಾಜ್ ಪಾರ್ಲರ್, ಸ್ಪಾ ಹೆಸರಲ್ಲಿ ವೇಶ್ಯವಾಟಿಕೆ ದಂಧೆ ನಡೆಸುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಇದೀಗ ಮತ್ತೊಂದು ಸ್ಪಾ ಸೆಂಟರ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಯಲಹಂಕ ನ್ಯೂ ಟೌನ್ ಪೊಲೀಸರು ರೋರಾ ಥಾಯ್ ಸ್ಪಾ ಮೇಲೆ ದಾಳಿ ನಡೆಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. 7 ಯುವತಿಯರನ್ನು ರಕ್ಷಿಸಲಾಗಿದೆ.
ರೋರಾ ಲಕ್ಸುರಿ ಥಾಯ್ ಸ್ಪಾ (ಮಸಾಜ್ ಪಾರ್ಲರ್) ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಥಾಯ್ಲೆಂಡ್ ಸೇರಿದಂತೆ ವಿವಿಧ ದೇಶದ ಮಹಿಳೆಯರನ್ನು ಟೂರಿಸ್ಟ್ ವೀಸಾ ಹಾಗೂ ಬ್ಯುಸಿನೆಸ್ ವೀಸಾ ಮೂಲಕ ಬೆಂಗಳೂರಿಗೆ ಕರೆತಂದು ವೇಶ್ಯವಾಟಿಕೆಗೆ ತಳ್ಳಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಈಶಾನ್ಯ ವಿಭಗದ ಡಿಸಿಪಿ ಯಲಹಂಕ ಟೌನ್ ಠಾಣೆ ಪೊಲಿಸರಿಗೆ ರೇಡ್ ಗೆ ಸೂಚಿಸಿದ್ದರು.
ಅದರಂತೆ ದಾಳಿ ನಡೆಸಿದ ಪೊಲಿಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, 7 ಯುವತಿಯರನ್ನು ರಕ್ಷಿಸಿದ್ದಾರೆ. ಯಲಹಂಕ ನ್ಯೂಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.