
ಕೋಲಾರ: ಶೀಘ್ರದಲ್ಲೇ 5000 ಪೊಲೀಸರ ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಕೆಜಿಎಫ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿರ್ಮಿಸಿದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಚೇರಿ, ಶಸ್ತ್ರಾಗಾರ ಮತ್ತು ಶ್ವಾನದಳ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರ ಅವಶ್ಯಕತೆ ಹೆಚ್ಚಿದ್ದು, ಶೀಘ್ರದಲ್ಲಿ 5000 ಪೊಲೀಸರ ನೇಮಕಾತಿ ಮಾಡಲಾಗುವುದು. ಪೊಲೀಸ್ ಇಲಾಖೆಗೆ ಕಳೆದು ಒಂದು ವರ್ಷದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ 100 ಹೊಸ ಕಟ್ಟಡ ನಿರ್ಮಿಸಲಾಗಿದೆ ಎಂದು ತಿಳಿಸಿದ್ದಾರೆ.