ಹುಬ್ಬಳ್ಳಿ: 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಪೊಲೀಸ್ ಇಲಾಖೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಪೊಲೀಸ್ ಇಲಾಖೆಯನ್ನು ಬಲಪಡಿಸಲು 16 ಸಾವಿರ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಕಾನ್ಸ್ಟೇಬಲ್ ಮತ್ತು ಇನ್ಸ್ಪೆಕ್ಟರ್ ಗಳನ್ನು ನೇಮಕ ಮಾಡಿಕೊಳ್ಳುವ ಜೊತೆಗೆ ಮುಂದಿನ ಐದು ವರ್ಷದಲ್ಲಿ 500 ಪೊಲೀಸ್ ಠಾಣೆ ಮತ್ತು 10 ಸಾವಿರ ಸಿಬ್ಬಂದಿ ಪೊಲೀಸ್ ವಸತಿಗೃಹ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.