ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 454 ಸಿವಿಲ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ನವೆಂಬರ್ 5 ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು.
ಪೊಲೀಸ್ ಇಲಾಖೆ ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿ ಆದೇಶಿಸಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಸಿವಿಲ್ ಕಾನ್ ಸ್ಟೆಬಲ್, ಸೇವಾ ನಿರತ ಹಾಗೂ ಬ್ಯಾಕ್ ಹುದ್ದೆಗಳಿಗೆ ನ. 5 ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 12:30 ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ.
ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ಕಲಬುರಗಿ, ಬೀದರ್, ಹಾವೇರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುವುದು, ಅರ್ಹ ಅಭ್ಯರ್ಥಿಗಳ ಮೊಬೈಲ್ ಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡುವ ಜೊತೆಗೆ ಲಿಂಕ್ ಸಹ ಕಳುಹಿಸಲಾಗುವುದು. ಕರೆ ಪತ್ರ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆ ಪತ್ರ ಡೌನ್ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿ ಯಡಾ ಮಾರ್ಟಿನ್ ತಿಳಿಸಿದ್ದಾರೆ.