ಬೆಂಗಳೂರು: ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ವಯೋಮಿತಿಯನ್ನು ಎರಡು ವರ್ಷ ಹೆಚ್ಚಳ ಮಾಡಲಾಗಿದೆ.
ಕನ್ನಡ ರಾಜ್ಯೋತ್ಸವ ದಿನದಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಮಾಡುವ ಕುರಿತು ತಿಳಿಸಿದ್ದರು.
ಎರಡು ವರ್ಷ ಪೊಲೀಸ್ ನೇಮಕಾತಿ ವಯೋಮಿತಿ ಸಡಿಲಿಕೆ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. ವಯೋಮಿತಿ ಹೆಚ್ಚಳಕ್ಕೆ ಸಾಕಷ್ಟು ಒತ್ತಡವಿತ್ತು. ನೇಮಕಾತಿ ಪ್ರಕ್ರಿಯೆ ಒಂದು ತಿಂಗಳ ಕಾಲ ಮುಂದೂಡಲಾಗಿತ್ತು. ಈಗ ಎರಡು ವರ್ಷ ವಯೋಮಿತಿ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗಿದೆ.