ತುಮಕೂರು: ಪೊಲೀಸ್ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ವೇತನ ತಾರತಮ್ಯ ನಿವಾರಣೆ ಉದ್ದೇಶದಿಂದ ಔರಾದ್ಕರ್ ವರದಿ ಅನ್ವಯ ಪೊಲೀಸರ ವೇತನ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದು, ವರದಿ ಜಾರಿಯಿಂದ ಸರ್ಕಾರಕ್ಕೆ 500 ಕೋಟಿ ರೂ. ಹೆಚ್ಚುವರಿ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.
ಪೊಲೀಸರಿಗೆ 13,000 ಮನೆ ಕಲ್ಪಿಸಲಾಗಿದ್ದು, ಶೇಕಡ 40ರಷ್ಟು ಸಿಬ್ಬಂದಿಗೆ ಮನೆ ನೀಡಲಾಗಿದೆ. 5 ವರ್ಷದಲ್ಲಿ ಶೇ. 70 ರಷ್ಟು ಸಿಬ್ಬಂದಿಗೆ ವಸತಿ ದೊರೆಯಲಿದೆ. ಒಂದು ಲಕ್ಷ ಜನರಿಗೆ 162 ಪೊಲೀಸರು ಬೇಕಿದೆ. ಆದರೆ, 4 ವರ್ಷದಿಂದ ಇಲಾಖೆಯಲ್ಲಿ ಹುದ್ದೆಗಳು ಭರ್ತಿಯಾಗಿಲ್ಲ. ಮುಂದಿನ ಎರಡು ವರ್ಷದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.