alex Certify ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ: ಮಂಗಳಮುಖಿಯರಿಗೂ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ: ಮಂಗಳಮುಖಿಯರಿಗೂ ಅವಕಾಶ

ಬೆಂಗಳೂರು: KSRP ಮತ್ತು IRB ವಿಶೇಷ ಮೀಸಲು ಸಬ್ ಇನ್ಸ್ ಪೆಕ್ಟರ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪುರುಷರು, ಮಹಿಳಾ ಅಭ್ಯರ್ಥಿಗಳೊಂದಿಗೆ ಮಂಗಳಮುಖಿಯರು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.

ಪೊಲೀಸ್ ಇಲಾಖೆಯ ಪ್ರತಿ ವಿಭಾಗದಲ್ಲಿ ಮಂಗಳಮುಖಿಯರಿಗೆ ಶೇಕಡ 1 ರಷ್ಟು ಮೀಸಲಾತಿ ನೀಡಲಾಗಿದೆ. ಈ ಮೂಲಕ ಕರ್ನಾಟಕ ಪೊಲೀಸ್ ಇಲಾಖೆ ಮೊದಲ ಬಾರಿಗೆ KSRP ಮತ್ತು IRB ವಿಶೇಷ ಮೀಸಲು ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಮಂಗಳಮುಖಿಯರಿಗೆ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸುವ ಮೂಲಕ ಪೊಲೀಸ್ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.

70 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 5 ಹುದ್ದೆಗಳು ಮಂಗಳಮುಖಿಯರಿಗೆ ಮೀಸಲಾಗಿವೆ. ಡಿಸೆಂಬರ್ 12 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 18 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ಮಾಹಿತಿಗಾಗಿ 080 22943346 ಸಂಪರ್ಕಿಸಬಹುದಾಗಿದೆ.

ವಿಧಿವಿಜ್ಞಾನ ಪ್ರಯೋಗಾಲಯದ 206 ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇವುಗಳಲ್ಲಿ 3 ಹುದ್ದೆಗಳು ಮಂಗಳಮುಖಿಯರಿಗೆ ಮೀಸಲಾಗಿರುತ್ತವೆ. ಅರ್ಜಿ ಸಲ್ಲಿಕೆಗೆ ಜ. 15  ಕೊನೆಯ ದಿನವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...