alex Certify ಪೊಲೀಸ್ ಇಲಾಖೆ ನೇಮಕಾತಿ: ಕ್ರೀಡಾಪಟುಗಳಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಇಲಾಖೆ ನೇಮಕಾತಿ: ಕ್ರೀಡಾಪಟುಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ 2 ರಷ್ಟು ಮೀಸಲಾತಿ ಕಲ್ಪಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಪೊಲೀಸ್ ಕಾನ್ ಸ್ಟೇಬಲ್ ಗಳಿಂದ ಡಿವೈಎಸ್ಪಿ ಹುದ್ದೆಯವರೆಗೂ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡಾ 2 ರಷ್ಟು ಮೀಸಲಾತಿ ನೀಡಲಾಗುವುದು. ಪೊಲೀಸ್ ಇಲಾಖೆ ನೇಮಕಾತಿ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಕೆಲವು ಹುದ್ದೆಗಳನ್ನು ಮೀಸಲಾಗಿ ಇಡಲಾಗಿತ್ತು. ಅದು ಅವೈಜ್ಞಾನಿಕವಾಗಿದೆ ಎಂಬ ಕಾರಣಕ್ಕೆ ಕೈಬಿಡಲಾಗಿತ್ತು. ಈಗ ಶೇಕಡ 2 ರಷ್ಟು ಮೀಸಲಾತಿಯನ್ನು ನೀಡಲಾಗಿದೆ. ಕಬಡ್ಡಿ, ಅಥ್ಲೆಟಿಕ್ಸ್, ಬಾಸ್ಕೆಟ್ ಬಾಲ್, ಬಾಕ್ಸಿಂಗ್, ಫುಟ್ಬಾಲ್, ಜಿಮ್ನಾಸ್ಟಿಕ್ ಸೇರಿದಂತೆ ಹಲವು ಕ್ರೀಡೆಗಳಲ್ಲಿ, ಕ್ರೀಡಾಕೂಟಗಳಲ್ಲಿ ಪದಕ ಪಡೆದವರಿಗೆ ಅವಕಾಶ ಸಿಗಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...