alex Certify ಪಿಯುಸಿ ಪಾಸಾದವರಿಗೆ ಶುಭ ಸುದ್ದಿ: ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಯುಸಿ ಪಾಸಾದವರಿಗೆ ಶುಭ ಸುದ್ದಿ: ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಹೆಡ್ ಕಾನ್ಸ್ ಟೇಬಲ್(ಮಿನಿಸ್ಟೀರಿಯಲ್) ದೆಹಲಿ ಪೊಲೀಸ್ ಪಡೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ಪಿ.ಯು.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್ ಸೈಟ್ ಮೂಲಕ www.ssckkr.kar.nic.in & https://ssc.nic.in. ಆನ್ಲೈಡನ್ನತಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂ.16 ಕೊನೆಯ ದಿನವಾಗಿರುತ್ತದೆ. ದಿನಾಂಕ 01-01-2022 ಕ್ಕೆ ವಯಸ್ಸು 18 ರಿಂದ 25 ವರ್ಷದೊಳಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-25502520 / 2557342 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ: 08192-259446 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...