alex Certify ಠಾಣೆಯಲ್ಲೇ ಪೊಲೀಸರ ಮೇಲೆ ಹಲ್ಲೆ, ಬೆದರಿಕೆ; ಸಮವಸ್ತ್ರ ಹರಿದ ಆರೋಪಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಠಾಣೆಯಲ್ಲೇ ಪೊಲೀಸರ ಮೇಲೆ ಹಲ್ಲೆ, ಬೆದರಿಕೆ; ಸಮವಸ್ತ್ರ ಹರಿದ ಆರೋಪಿಗಳು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳು ಪೊಲೀಸರ ಸಮವಸ್ತ್ರ ಹರಿದು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಬೇಳೂರು ಗ್ರಾಮದ ಮಕ್ಕೀಮನೆ ನಿವಾಸಿಗಳಾದ ಕೃಷ್ಣಮೂರ್ತಿ(45), ರಾಮಚಂದ್ರ(50) ಬಂಧಿತ ಆರೋಪಿಗಳು. ಆರೋಪಿಗಳಿಂದ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿ ದೇವರಾಜ ನಾಯ್ಕ್ ದೂರು ನೀಡಿದ್ದಾರೆ. ಭಾನುವಾರ ಸಂಜೆ ಕೃಷ್ಣಮೂರ್ತಿ ಮತ್ತು ರಾಮಚಂದ್ರ ಅವರನ್ನು ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಪಿಎಸ್ಐ ನಾಗರಾಜ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ವೆಂಕಟೇಶ್ ಮತ್ತು ದೇವರಾಜ ನಾಯ್ಕ್ ಅವರ ಮೇಲೆ ಹಲ್ಲೆ ಮಾಡಿ ಸಮವಸ್ತ್ರ ಹರಿದು ಅವಾಚ್ಯವಾಗಿ ಬೈದಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಹೇಳಲಾಗಿದೆ. ಠಾಣೆ ಪೊಲೀಸರಿಂದಲೇ ದೂರು ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...