alex Certify ಬೆಂಬಲಿಗರಿಗೆ ಕಿರುಕುಳ: ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ಶಾಸಕ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಬಲಿಗರಿಗೆ ಕಿರುಕುಳ: ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ಶಾಸಕ ಪ್ರತಿಭಟನೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಬೆಂಬಲಿಗರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಶಾಸಕ ಶಿವಗಂಗಾ ಬಸವರಾಜ್ ಚನ್ನಗಿರಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಚನ್ನಗಿರಿ ಇನ್ಸ್ ಪೆಕ್ಟರ್ ಮಧುಕುಮಾರ್ ಕಾರ್ಯಕರ್ತರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಾಜಿ ಶಾಸಕರ ಮಾತು ಕೇಳಿ ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಡುತ್ತಿದ್ದಾರೆ. ಇನ್ಸ್ ಪೆಕ್ಟರ್ ಮಧು ವರ್ಗಾವಣೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಬೆಂಬಲಿಗರ ಜೊತೆಗೆ ಶಾಸಕ ಶಿವಗಂಗಾ ಬಸವರಾಜ್ ಪ್ರತಿಭಟನೆ ನಡೆಸಿದ್ದು, ಚನ್ನಗಿರಿ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...