ಹಾಸನ: ಹಾಸನದ ವಿದ್ಯಾನಗರದ ಮೆಟ್ರಿಕ್ ನಂತರ ಬಾಲಕರ ಹಾಸ್ಟೆಲ್ ನಲ್ಲಿ ಪೊಲೀಸರು ದುರ್ವರ್ತನೆ ತೋರಿದ ಆರೋಪ ಕೇಳಿ ಬಂದಿದೆ.
ರಾತ್ರಿ ಗಸ್ತಿನಲ್ಲಿ ಪೊಲೀಸರು ಕಾನೂನು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಹಾಸ್ಟೆಲ್ ಗೆ ಬಂದಿದ್ದು, ವಿದ್ಯಾರ್ಥಿಗಳೊಂದಿಗೆ ದುರ್ವರ್ತನೆ ತೋರಿದ್ದಾರೆ. ಅಲ್ಲದೇ, ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ ಹಿನ್ನೆಲೆಯಲ್ಲಿ ಹಾಸನ ಡಿ.ವೈ.ಎಸ್.ಪಿ. ಮುರಳಿಧರ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.