ಬೆಂಗಳೂರು: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಗ್ಗಲಿಪುರ ಪೊಲೀಸರು ಆರೋಪಿ ರಾಘವ ಭಟ್ ಅವರ ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಪ್ರದೀಪ್ ಜೊತೆಗಿನ ವ್ಯವಹಾರದ ಬಗ್ಗೆ ರಾಘವ ಭಟ್ ಮಾಹಿತಿ ನೀಡಿದ್ದಾರೆ. ಪ್ರದೀಪ್ ಜೊತೆಗೆ 10 ಲಕ್ಷ ರೂಪಾಯಿ ವ್ಯವಹಾರ ನಡೆದಿರುವುದು ಗೊತ್ತಾಗಿದೆ. ನಗದು ಮೂಲಕ 3 ಲಕ್ಷ ರೂಪಾಯಿ ವಾಪಸ್ ಕೊಟ್ಟಿದ್ದ ರಾಘವ ಭಟ್ 7 ಲಕ್ಷ ರೂಪಾಯಿಯನ್ನು ಚೆಕ್ ಮೂಲಕ ನೀಡಿದ್ದರು.ಆದರೆ, ಚೆಕ್ ಬೌನ್ಸ್ ಆಗಿದ್ದು ಪ್ರದೀಪ್ ನ್ಯಾಯಾಲಯದಲ್ಲಿ ಕೇಸು ದಾಖಲಿಸಿದ್ದರು ಎನ್ನಲಾಗಿದೆ.
ಪೊಲೀಸರ ವಿಚಾರಣೆಗೆ ಮೂವರು ಆರೋಪಿಗಳು ಹಾಜರಾಗಿಲ್ಲ. ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ ಅವರು ವಿಚಾರಣೆಗೆ ಹಾಜರಾಗಿಲ್ಲ. ಅವರಿಗೆ ಈಗಾಗಲೇ ಕಗ್ಗಲಿಪುರ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಮತ್ತೊಮ್ಮೆ ನೋಟಿಸ್ ನೀಡಲು ಚಿಂತನೆ ನಡೆಸಿದ್ದಾರೆ.