
ಬೆಂಗಳೂರು: ರೈಲಿಗೆ ಸಿಲುಕಿ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪ್ಪಣ್ಣ ಅವರ ತಾಯಿ ಬಸಮ್ಮ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪತ್ನಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಅವರ ಪತ್ನಿ ಪಾರ್ವತಿ, ಮಾವ ಯಮುನಪ್ಪ, ಬಾಮೈದ ಮಲ್ಲಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪತ್ನಿ, ಮಾವ, ಬಾಮೈದ ಅವರು ಯಾದಗಿರಿ ಜಿಲ್ಲೆಯ ಸುರಪುರ ಮೂಲದವರಾಗಿದ್ದಾರೆ. ಇವರು ತಿಪ್ಪಣ್ಣನಿಗೆ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ಆರೋಪದಡಿ ಕೇಸು ದಾಖಲಿಸಿಕೊಂಡ ಬೆಂಗಳೂರು ರೈಲ್ವೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಪತ್ನಿ ಪಾರ್ವತಿ, ಮಾವ ಯಮುನಪ್ಪ ವಿರುದ್ಧ ಕಿರುಕುಳ, ಜೀವ ಬೆದರಿಕೆ ಆರೋಪ ಮಾಡಿದ ತಿಪ್ಪಣ್ಣ ಡೆತ್ ನೋಟ್ ಬರೆದಿಟ್ಟು, ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದರು. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.