
ವಿಜಯಪುರ: ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಪೊಲೀಸ್ ವಿಚಾರಣೆಗೆ ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೌನೇಶ್ ಅಬ್ಬಿಹಾಳ(30) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೆಲವು ದಿನಗಳ ಹಿಂದೆ ಮೌನೇಶ್ ಸೋದರಮಾವ ಬಸವರಾಜ ನಾಪತ್ತೆಯಾಗಿದ್ದು, ಈ ಬಗ್ಗೆ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೌನೇಶ್ ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು.
ಗುರುವಾರ ಮತ್ತೆ ವಿಚಾರಣೆಗೆ ಬರುವಂತೆ ಹೇಳಿದ್ದು, ಯುವಕ ವಿಚಾರಣೆಗೆ ಹೆದರಿ ಜಮೀನಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಮೌನೇಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.