
ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡ ಬಡಾವಣೆಯಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ದಾವಣಗೆರೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಅವರು ಶಿವಮೊಗ್ಗ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಮತ್ತು ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಠಾಣೆ ಸಿಪಿಐ ಅಭಯ್ ಪ್ರಕಾಶ್, ಸಿಬ್ಬಂದಿಗಳಾದ ಕಾಶಿನಾಥ್, ರಂಗನಾಥ್, ಶಿವರಾಜ್ ಅವರನ್ನು ಅಮಾನತು ಮಾಡಲಾಗಿದೆ. ಅಕ್ಟೋಬರ್ 1ರಂದು ಭಾನುವಾರ ರಾಗಿಗುಡ್ಡದಲ್ಲಿ ಮೆರವಣಿಗೆ ವೇಳೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.