alex Certify ರಾಗಿ ಗುಡ್ಡದಲ್ಲಿ ಗಲಭೆ ಪ್ರಕರಣ: ನಾಲ್ವರು ಪೊಲೀಸರ ತಲೆದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಗಿ ಗುಡ್ಡದಲ್ಲಿ ಗಲಭೆ ಪ್ರಕರಣ: ನಾಲ್ವರು ಪೊಲೀಸರ ತಲೆದಂಡ

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡ ಬಡಾವಣೆಯಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ದಾವಣಗೆರೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಅವರು ಶಿವಮೊಗ್ಗ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಮತ್ತು ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಠಾಣೆ ಸಿಪಿಐ ಅಭಯ್ ಪ್ರಕಾಶ್, ಸಿಬ್ಬಂದಿಗಳಾದ ಕಾಶಿನಾಥ್, ರಂಗನಾಥ್, ಶಿವರಾಜ್ ಅವರನ್ನು ಅಮಾನತು ಮಾಡಲಾಗಿದೆ. ಅಕ್ಟೋಬರ್ 1ರಂದು ಭಾನುವಾರ ರಾಗಿಗುಡ್ಡದಲ್ಲಿ ಮೆರವಣಿಗೆ ವೇಳೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...