ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಯತ್ನ ಪ್ರಕರಣ: ಮೂವರು ಪೊಲೀಸರ ತಲೆದಂಡ

ಮೈಸೂರು: ಕೆಆರ್ ನಗರದ ಚಂದಗಾಲು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಕೆಆರ್ ನಗರ ಠಾಣೆ ಪೋಲಿಸ್ ಇನ್ಸ್ ಪೆಕ್ಟರ್ ಪಿ.ಪಿ. ಸಂತೋಷ್, ಎಎಸ್ಐ ಗಿರೀಶ್ ಮತ್ತು ಮುಖ್ಯಪೇದೆ ರಾಘವೇಂದ್ರ ಅವರನ್ನು ಅಮಾನತು ಮಾಡಲಾಗಿದೆ. ಚಂದಗಾಲು ಗ್ರಾಮದ ಮಹದೇವ ನಾಯಕ ಅವರ ಅಪ್ರಾಪ್ತ ಮೊಮ್ಮಗಳ ಜೊತೆ ಸಲುಗೆ ಬೆಳೆಸಿಕೊಂಡು ಖಾಸಗಿ ಕ್ಷಣಗಳ ವಿಡಿಯೋ ಮಾಡಿಕೊಂಡು ಚೀರನಹಳ್ಳಿ ಯುವಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಜೂನ್ 1ರಂದು ಪೊಲೀಸ್ ಠಾಣೆಗೆ ಆರೋಪಿ ವಿರುದ್ಧ ದೂರು ನೀಡಲು ಹೋದಾಗ ಪೊಲೀಸ್ ಅಧಿಕಾರಿಗಳು ನಿರ್ಲಕ್ಷಿಸಿದ್ದರು.

ಇದರಿಂದ ಮನನೊಂದು, ಮರ್ಯಾದೆಗೆ ಅಂಜಿ ಮಹದೇವ ನಾಯಕ, ಅಪ್ರಾಪ್ತ ಮೊಮ್ಮಗಳು ಹಾಗೂ ಇಬ್ಬರು ಮಹಿಳೆಯರು ಶನಿವಾರ ಬೆಳಗ್ಗೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮಹದೇವ ನಾಯಕ ಮೃತಪಟ್ಟು, ಚಿಂತಾಜನಕ ಸ್ಥಿತಿಯಲ್ಲಿದ್ದ ಉಳಿದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read