
ತುಮಕೂರು: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್ ಕಾನ್ಸ್ ಟೇಬಲ್ ಬಂಧಿಸಲಾಗಿದೆ.
ಕೆಬಿ ಕ್ರಾಸ್ ನ ಮಿಲ್ಟ್ರಿ ಹೋಟೆಲ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಿಬ್ಬನಹಳ್ಳಿ ಠಾಣೆಯ ಪೊಲೀಸ್ ಕೊಲೆ ಬೆದರಿಕೆ ಹಾಕಿದ್ದಾಗಿ ಆರೋಪಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳೊಂದಿಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.