alex Certify BIG NEWS: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ

ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ದಂಡ ವಿಧಿಸಿದ್ದಕ್ಕಾಗಿ ಪೊಲೀಸ್ ವಾಹನಕ್ಕೆ ಆಟೋ ಚಾಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಲ್ಲಿ ನಡೆದಿದೆ.

ಆಟೋ ಚಾಲಕ ಅನ್ಸಾರ್ ಎಂಬಾತ ಸಮವಸ್ತ್ರ ಧರಿಸದೇ ಮೊಬೈಲ್ ನಲ್ಲಿ ಮಾತನಾಡುತ್ತ ಆಟೋ ಚಲಾಯಿಸುತ್ತಿದ್ದ. ಆಟೋ ತಡೆದ ಪೊಲೀಸರು ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ದಂಡ ವಿಧಿಸಿದ್ದಾರೆ.

ಇದರಿಂದ ಸಿಟ್ಟಿಗೆದ್ದ ಆಟೋ ಚಾಲಕ, ಆಟೋ ಹಾಗೂ ಪೊಲೀಸ್ ವಾಹನಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...