ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರು ರಾಜ್ಯದ ಪೊಲೀಸರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಪೊಲೀಸರಿಗೆ ವಾರಕ್ಕೊಮ್ಮೆ ಇರುವ ರಜೆಯನ್ನು ಕಡ್ಡಾಯವಾಗಿ ನೀಡಬೇಕೆಂದು ಡಿಜಿಪಿ ಪ್ರವೀಣ್ ಸೂದ್ ಅವರು ಸುತ್ತೋಲೆ ಹೊರಡಿಸಿದ್ದಾರೆ.
ಪೊಲೀಸರಿಗೆ ರಜೆ ಇದ್ದರೂ, ಅದನ್ನು ಪಡೆಯದೆ ಕೆಲಸ ನಿರ್ವಹಿಸುವಂತಾಗಿದೆ. ಪೊಲೀಸರಿಗೆ ವಾರದ ರಜೆ ಇದ್ದರೂ ಠಾಣಾಧಿಕಾರಿಗಳು ಅವಕಾಶ ನೀಡುತ್ತಿಲ್ಲ ಎನ್ನುವ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ವಾರದಲ್ಲಿ ಒಂದು ದಿನ ಕಡ್ಡಾಯ ರಜೆ ನೀಡುವಂತೆ ತಿಳಿಸಲಾಗಿದೆ.
ಈ ಹಿಂದೆಯೇ ವಾರದ ರಜೆಗೆ ಆದೇಶ ನೀಡಿದ್ದರೂ, ಸರಿಯಾಗಿ ಪಾಲನೆ ಆಗುತ್ತಿಲ್ಲ. ಹಾಗಾಗಿ ಮತ್ತೊಮ್ಮೆ ಸುತ್ತೋಲೆ ಹೊರಡಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ಪೊಲೀಸ್ ಆಯುಕ್ತರು, ವಲಯ ಐಜಿಪಿಗಳಿಗೆ ಸೂಚನೆ ನೀಡಲಾಗಿದೆ. ತುರ್ತು ಪರಿಸ್ಥಿತಿ ಹೊರತಾಗಿ ಎಲ್ಲಾ ಸಂದರ್ಭದಲ್ಲಿಯೂ ವಾರದ ರಜೆಯನ್ನು ಕಡ್ಡಾಯವಾಗಿ ನೀಡಬೇಕೆಂದು ಹೇಳಲಾಗಿದೆ.