ದಕ್ಷಿಣ ಏಷ್ಯಾದ ಕೆಲ ರಾಷ್ಟ್ರಗಳಲ್ಲಿ ಲಿಂಗ ಪಕ್ಷಪಾತ ಹಾಗೂ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಕೆಲವು ಮಹಿಳೆಯರಿಗೆ ತಮ್ಮ ಕೆಲಸ ಮಾಡುವ ಜಾಗದಲ್ಲಿ ಸುರಕ್ಷತೆ ಇರುವುದಿಲ್ಲ. ಮಹಿಳಾ ಸಬ್ ಇನ್ಸ್ಪೆಕ್ಟರ್ ಅವರನ್ನು ಅಪಹರಿಸಿ, ಲೈಂಗಿಕವಾಗಿ ಹಲ್ಲೆ ಮಾಡಿರುವ ಆಘಾತಕಾರಿ ಪ್ರಕರಣ ಭಾನುವಾರ ಸಂಭವಿಸಿದೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಜಾಫಗರ್ ಜಿಲ್ಲೆಯಲ್ಲಿ ಅಪರಾಧ ವಿಭಾಗದಲ್ಲಿ ಅಧಿಕಾರಿಯಾಗಿರುವ ಮಹಿಳಾ ಸಬ್ ಇನ್ಸ್ಪೆಕ್ಟರನ್ನು ಅಪಹರಿಸಿ, ಆಕೆಯ ಮೇಲೆ ಲೈಂಗಿಕವಾಗಿ ಹಲ್ಲೆ ಮಾಡಲಾಗಿದೆ ಎಂದು ಡಾನ್ ಪತ್ರಿಕೆಯು ವರದಿ ಮಾಡಿದೆ. ಆರೋಪಿ ಮೇಲೆ ಕೇಸ್ ದಾಖಲಾಗಿದೆ. ದೂರಿನ ಪ್ರಕಾರ, ಈತ ಪಿಸ್ತೂಲ್ ತೋರಿಸಿ, ತನ್ನ ಕಾರಿನಲ್ಲಿ ಕುಳ್ಳಿರಿಸಿ, ಪೊಲೀಸ್ ಅಧಿಕಾರಿಣಿಯನ್ನು ಚಮ್ಮಾನ್ ಬೈಪಾಸ್ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಅಲ್ಲಿ ಅತ್ಯಾಚಾರಕ್ಕೆ ಪ್ರಯತ್ನ ಮಾಡಿದ್ದಾನೆ.
ವಿಶ್ವದ ಅತಿ ಚಿಕ್ಕ ದೇಶಗಳ ಬಗ್ಗೆ ನಿಮಗೆಷ್ಟು ಗೊತ್ತು…….?
ಸದ್ಯಕ್ಕೆ ಈಕೆಯನ್ನು ಮುಜಾಫಗರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಸಿದ್ದು, ಶಂಕಿತನ ಕಾರ್ ಮತ್ತು ಪಿಸ್ತೂಲ್ ವಶಪಡಿಸಿಕೊಂಡು, ಆತನನ್ನು ಬಂಧಿಸಲಾಗಿದೆ. ಪಾಕಿಸ್ತಾನದಲ್ಲಿ ಈ ರೀತಿಯ ಹಲವು ಪ್ರಕರಣಗಳು, ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಸೇರಿ, ಹಲವು ಪ್ರಕರಣಗಳು ಸಂಭವಿಸಿದ್ದು, ಸರ್ಕಾರ ಏನು ಕ್ರಮ ಕೈಗೊಳ್ಳದಿರುವುದು ಮತ್ತಷ್ಟು ಆಘಾತವನ್ನುಂಟು ಮಾಡಿದೆ.