alex Certify 5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಮಾ. 3 ರಿಂದ 6ರವರೆಗೆ ಪೋಲಿಯೋ ಲಸಿಕೆ ಅಭಿಯಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಮಾ. 3 ರಿಂದ 6ರವರೆಗೆ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು: ರಾಜ್ಯಾದ್ಯಂತ ಮಾರ್ಚ್ 3 ರಿಂದ 6 ರವರೆಗೆ ಮೂರು ದಿನಗಳ ಕಾಲ ಪೋಲಿಯೋ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಯಸಿಕೆ ಹಾಕಿಸಬೇಕು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ. ಮಾರ್ಚ್ 3ರಿಂದ 6ರವರೆಗೆ ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ಹಮ್ಮಿಕೊಂಡಿದ್ದು, ಈ ವೇಳೆ ಹಿಂದುಳಿದ ಪ್ರದೇಶಗಳ ಮೇಲೆ ಹೆಚ್ಚಿನ ನಿಗಾ ವಹಿಸಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ತಿಳಿಸಿದ್ದಾರೆ.

ಮೊದಲ ದಿನ ಲಸಿಕಾ ಕೇಂದ್ರಗಳಲ್ಲಿ ಹಾಗೂ ಮೂರು ದಿನಗಳ ಅವಧಿಯಲ್ಲಿ ಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...