ಬೆಂಗಳೂರು: ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ ಸ್ಪೋಟಗೊಂಡಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರಿದವರಿಗೆಲ್ಲರಿಗೂ ಟಿಕೆಟ್ ಕೊಡಬೇಕೆಂದರೆ ಆಗುವುದಿಲ್ಲ ಎಂದು ಹೇಳಿದ್ದಾರೆ.
ರಾಜಕಾರಣ ಫುಟ್ಬಾಲ್ ಅಲ್ಲ, ಚೆಸ್ ಗೇಮ್ ಇದ್ದಂತೆ. ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಟಿಕೆಟ್ ಕೊಡುವುದಾಗಿ ಹೇಳಿರಲಿಲ್ಲ. ಬೇಷರತ್ ಆಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಪಕ್ಷಕ್ಕೆ ಸೇರಿದವರೆಲ್ಲರಿಗೂ ಟಿಕೆಟ್ ಕೊಡಲು ಆಗುವುದಿಲ್ಲ. ಅಸಮಾಧಾನ ಇರುವವರನ್ನು ಕರೆದು ಮಾತನಾಡುತ್ತೇವೆ. ಸಮಸ್ಯೆ ಸರಿಪಡಿಸುತ್ತೇವೆ ಎಂದು ತಿಳಿಸಿದ್ದಾರೆ.