alex Certify ರಾಜ್ಯ ರಾಜಕೀಯದ ಬಗ್ಗೆ ಬಿಜೆಪಿ ನಾಯಕ ಯತ್ನಾಳ್ ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ರಾಜಕೀಯದ ಬಗ್ಗೆ ಬಿಜೆಪಿ ನಾಯಕ ಯತ್ನಾಳ್ ಹೊಸ ಬಾಂಬ್

ವಿಜಯಪುರ: ಲೋಕಸಭೆ ಚುನಾವಣೆಯೊಳಗೆ ರಾಜ್ಯ ರಾಜಕೀಯದಲ್ಲಿ ಅನಾಹುತ ನಡೆಯಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಮೊದಲು ಅಥವಾ ನಂತರ ರಾಜಕೀಯ ವಲಯದಲ್ಲಿ ಅನಾಹುತ ನಡೆಯಲಿದ್ದು, ಇದಕ್ಕಾಗಿ ಕಾಂಗ್ರೆಸ್ ಭಯಗೊಂಡಿರುವುದರಿಂದ ಬಿಜೆಪಿಯವರನ್ನು ಸೆಳೆಯತೊಡಗಿದೆ. ಈ ಮೂಲಕ ಲೋಕಸಭೆ ಚುನಾವಣೆ ಗೆಲ್ಲಲು ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ತಮ್ಮ ಪಕ್ಷದ 135 ಶಾಸಕರ ಮೇಲೆಯೇ ವಿಶ್ವಾಸ ಇಲ್ಲದಂತಾಗಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಮುಖಂಡರಿಗೆ ಗಾಳ ಹಾಕುತ್ತಿದ್ದಾರೆ. ಬಿಜೆಪಿಯವರು ಬಂದರೆ ಮಾತ್ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎನ್ನುವ ವಿಶ್ವಾಸ ಕಾಂಗ್ರೆಸ್ ನಾಯಕರಲ್ಲಿದೆ ಎಂದು ವ್ಯಂಗ್ಯವಾಡಿದ್ದಾರೆ,

ಕರ್ನಾಟಕದಲ್ಲಿ ಬಿಜೆಪಿ ಮುಳುಗುತ್ತಿದೆ ಎಂದು ಕಾಂಗ್ರೆಸ್ ನವರು ಗುಲ್ಲೆಬ್ಬಿಸುತ್ತಿದ್ದು, ಸೋಲಿನಿಂದ ಕಂಗೆಡದೆ ಬಿಜೆಪಿ ಫಿನಿಕ್ಸ್ ಪಕ್ಷಿಯಂತೆ ಮತ್ತೆ ಹುಟ್ಟಿ ಬರಲಿದೆ. ಲೋಕಸಭೆ ಚುನಾವಣೆ ವೇಳೆಗೆ ರಾಜಕೀಯ ವಲಯದಲ್ಲಿ ಅನಾಹುತ ನಡೆಯಲಿದೆ ಎಂದು ಯತ್ನಾಳ್ ಬಾಂಬ್ ಸಿಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...