ಚಿಕ್ಕಬಳ್ಳಾಪುರ: ಮಾಲಿನ್ಯ ನಿಯಂತಣ ಮಂಡಳಿ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆದಿದೆ.
ನೂತನ ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಎನ್ ಒಸಿ ನೀಡಲು 30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಖಾಜಾವಲಿ ಲೋಕಾಯುಕ್ತ ಬಲೆಗೆ ಬದ್ದ ಸಿಬ್ಬಂದಿ. ಶ್ರೀನಾಥ್ ಎಂಬುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಕರಣದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಅಧಿಕಾರಿ ಸಿದ್ದಪ್ಪಾ ಪಾತ್ರವೂ ಇದೆ ಎಂಬ ಆರೋಪ ಕೇಳಿಬಂದಿದ್ದು, ತನಿಖೆ ನಡೆಸಲಾಗುತ್ತಿದೆ.