ಬೆಂಗಳೂರು: ಪೊಂಗಲ್ ಹಬ್ಬದ ಪ್ರಯುಕ್ತ ಜನವರಿ 10ರಂದು ಬೆಂಗಳೂರು –ಚೆನ್ನೈ, ಬೆಂಗಳೂರು –ತೂತುಕುಡಿ- ಮೈಸೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ನೈರುತ್ಯ ರೈಲ್ವೆ ವ್ಯವಸ್ಥೆ ಮಾಡಿದೆ.
ಜನವರಿ 10ರಂದು ಬೆಳಗ್ಗೆ 8.05 07319/ 07320 ಸಂಖ್ಯೆಯ ವಿಶೇಷ ಎಕ್ಸ್ಪ್ರೆಸ್ ರೈಲು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಹೊರಟು 2.40ಕ್ಕೆ ಚೆನ್ನೈನ ಡಾ.ಎಂಜಿಆರ್ ಸೆಂಟ್ರಲ್ ನಿಲ್ದಾಣ ತಲುಪಲಿದೆ. ಇದೇ ರೈಲು ಪುನಃ 2.40ಕ್ಕೆ ಚೆನ್ನೈನಿಂದ ಹೊರಟು ರಾತ್ರಿ 10:55 ಕ್ಕೆ ಬೆಂಗಳೂರು ಕೆಎಸ್ಆರ್ ನಿಲ್ದಾಣ ತಲುಪಲಿದೆ.
ಎರಡೂ ಮಾರ್ಗಗಳಲ್ಲಿ ಬರುವ ಯಶ್ವಂತಪುರ, ಕೃಷ್ಣರಾಜಪುರ, ಬಂಗಾರಪೇಟೆ, ಅಂಬೂರು, ಗುಡಿಯಾಟ್ಟಂ, ಕಟಪಾಡಿ, ಶೋಲಿಂಗೂರು, ಅರಕ್ಕೋಣಂ, ತಿರುವಳ್ಳೂರು ಮತ್ತು ಪೆರಂಬೂರು ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ.
06569/ 06570 ಸಂಖ್ಯೆಯ ವಿಶೇಷ ಎಕ್ಸ್ಪ್ರೆಸ್ ರೈಲು ಜನವರಿ 10ರಂದು ರಾತ್ರಿ 10 ಗಂಟೆಗೆ ಬೆಂಗಳೂರಿನ ಎಸ್ಎಂವಿಟಿ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 11 ಗಂಟೆಗೆ ತೂತುಕುಡಿ ನಿಲ್ದಾಣ ತಲುಪಲಿದೆ. ಇದೇ ರೈಲು ಜನವರಿ 11ರಂದು ಮಧ್ಯಾಹ್ನ 1 ಗಂಟೆಗೆ ತೂತುಕುಡಿ ಎಂದ ಹೊರಟು ಮರುದಿನ ಬೆಳಗ್ಗೆ 6.30ಕ್ಕೆ ಮೈಸೂರು ತಲುಪಲಿದೆ. ಈ ರೈಲು ಕೃಷ್ಣರಾಜಪುರ, ಬಂಗಾರಪೇಟೆ, ಸೇಲಂ, ನಾಮಕ್ಕಲ್, ಕರೂರು, ದಿಂಡಿಗಲ್, ಮಧುರೆ, ವಿರುಧನಗರ, ಸಾತೂರ್, ಕೋವಿಲ್ ಪಟ್ಟಿ ನಿಲ್ದಾಣಗಳ ಮೂಲಕ ಸಂಚರಿಸಲಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ ನೀಡಿದೆ.