ನವದೆಹಲಿ: ಬಡವರು, ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಸೈಟ್ ನೀಡಲು ರಾಷ್ಟ್ರೀಯ ಸಹಕಾರಿ ವಸತಿ ಮಂಡಳಿ ಸಭೆ ನಿರ್ಧರಿಸಿದೆ.
ನವದೆಹಲಿಯಲ್ಲಿ ರಾಷ್ಟ್ರೀಯ ಸಹಕಾರಿ ವಸತಿ ಮಹಾಮಂಡಳಿ ಅಧ್ಯಕ್ಷ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ವಸತಿ ಮಂಡಳಿ ಕಚೇರಿಯಲ್ಲಿ ಸಾಮಾನ್ಯ ಸಭೆ ನಡೆದಿದ್ದು, ಬಡವರು ಮತ್ತು ಮಧ್ಯಮ ವರ್ಗದವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ನಿವೇಶನ ದೊರಕಿಸಿಕೊಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯಲ್ಲಿ ರಾಜ್ಯದ ಸಹಕಾರ ಸಚಿವ ಮತ್ತು ರಾಷ್ಟ್ರೀಯ ಸಹಕಾರ ವಸತಿ ಮಹಾಮಂಡಳ ನಿರ್ದೇಶಕ ಎಸ್.ಟಿ. ಸೋಮಶೇಖರ್ ಸೇರಿದಂತೆ ವಿವಿಧ ರಾಜ್ಯಗಳ ನಿರ್ದೇಶಕರು ಭಾಗವಹಿಸಿದ್ದರು.
ರಾಷ್ಟ್ರೀಯ ವಸತಿ ನೀತಿ ಜಾರಿಗೊಳಿಸಲು ಸಭೆಯಲ್ಲಿ ಚರ್ಚೆ ನಡೆಸಿದ್ದು, ಬಡವರು ಮತ್ತು ಮಧ್ಯಮ ವರ್ಗದವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಸೈಟ್ ದೊರಕಿಸಿಕೊಡುವ ಕುರಿತಾಗಿ ಇರುವ ಅಡ್ಡಿ, ಅಡಚಣೆಗಳನ್ನು ಪರಿಹರಿಸಲು ಕೇಂದ್ರ ಗೃಹಸಚಿವ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಲು ತೀರ್ಮಾನಿಸಲಾಗಿದೆ.