alex Certify ಬಡವರು, ಮಧ್ಯಮ ವರ್ಗದವರಿಗೆ ಭರ್ಜರಿ ಗುಡ್ ನ್ಯೂಸ್: ಅತಿ ಸುಲಭ ದರದಲ್ಲಿ ಸೈಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಡವರು, ಮಧ್ಯಮ ವರ್ಗದವರಿಗೆ ಭರ್ಜರಿ ಗುಡ್ ನ್ಯೂಸ್: ಅತಿ ಸುಲಭ ದರದಲ್ಲಿ ಸೈಟ್

ನವದೆಹಲಿ: ಬಡವರು, ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಸೈಟ್ ನೀಡಲು ರಾಷ್ಟ್ರೀಯ ಸಹಕಾರಿ ವಸತಿ ಮಂಡಳಿ ಸಭೆ ನಿರ್ಧರಿಸಿದೆ.

ನವದೆಹಲಿಯಲ್ಲಿ ರಾಷ್ಟ್ರೀಯ ಸಹಕಾರಿ ವಸತಿ ಮಹಾಮಂಡಳಿ ಅಧ್ಯಕ್ಷ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ವಸತಿ ಮಂಡಳಿ ಕಚೇರಿಯಲ್ಲಿ ಸಾಮಾನ್ಯ ಸಭೆ ನಡೆದಿದ್ದು, ಬಡವರು ಮತ್ತು ಮಧ್ಯಮ ವರ್ಗದವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ನಿವೇಶನ ದೊರಕಿಸಿಕೊಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯಲ್ಲಿ ರಾಜ್ಯದ ಸಹಕಾರ ಸಚಿವ ಮತ್ತು ರಾಷ್ಟ್ರೀಯ ಸಹಕಾರ ವಸತಿ ಮಹಾಮಂಡಳ ನಿರ್ದೇಶಕ ಎಸ್.ಟಿ. ಸೋಮಶೇಖರ್ ಸೇರಿದಂತೆ ವಿವಿಧ ರಾಜ್ಯಗಳ ನಿರ್ದೇಶಕರು ಭಾಗವಹಿಸಿದ್ದರು.

ರಾಷ್ಟ್ರೀಯ ವಸತಿ ನೀತಿ ಜಾರಿಗೊಳಿಸಲು ಸಭೆಯಲ್ಲಿ ಚರ್ಚೆ ನಡೆಸಿದ್ದು, ಬಡವರು ಮತ್ತು ಮಧ್ಯಮ ವರ್ಗದವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಸೈಟ್ ದೊರಕಿಸಿಕೊಡುವ ಕುರಿತಾಗಿ ಇರುವ ಅಡ್ಡಿ, ಅಡಚಣೆಗಳನ್ನು ಪರಿಹರಿಸಲು ಕೇಂದ್ರ ಗೃಹಸಚಿವ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಲು ತೀರ್ಮಾನಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...