
ಬೆಂಗಳೂರು: ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಧರ್ಮ ಪತ್ನಿ ರಾಜೇಶ್ವರಿ ತೇಜಸ್ವಿ(85) ನಿಧನರಾಗಿದ್ದಾರೆ.
ಇಂದು ಬೆಳಿಗ್ಗೆ 6.30 ಕ್ಕೆ ಬೆಂಗಳೂರಿನ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿಧನರಾದರು. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್ ನ ಪುತ್ರಿಯ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ಸಂಜೆ 5.30 ರ ವರೆಗೆ ಅಂತಿಮ ದರ್ಶನ ಇರಲಿದೆ. ಆಸ್ಪತ್ರೆಗೆ ದೇಹದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.
ಸಂತಾಪ:
ಖ್ಯಾತ ಸಾಹಿತಿ ದಿವಂಗತ ಪೂರ್ಣಚಂದ್ರ ತೇಜಸ್ವಿಯವರ ಧರ್ಮಪತ್ನಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಅವರ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ ಸೂಚಿಸಿದ್ದಾರೆ.
ಸರಳರೂ, ಸಹೃದಯಿಗಳು ಆಗಿದ್ದ ರಾಜೇಶ್ವರಿ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಹಾಗೂ ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ, ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.