alex Certify ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಪೂರ್ಣಿಮಾ ಅವರ ಪತಿ ಶ್ರೀನಿವಾಸ್ ಕೂಡ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರಲಿದ್ದಾರೆ. ಕಳೆದ ತಿಂಗಳು ಕೆಆರ್ ಪುರದಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಪಕ್ಷ ಸೇರುವ ಬಗ್ಗೆ ಡಿ.ಕೆ. ಶಿವಕುಮಾರ್ ಗೆ ಪೂರ್ಣಿಮಾ ಶ್ರೀನಿವಾಸ್ ಭರವಸೆ ನೀಡಿದ್ದರು. ಅಂತೆಯೇ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

ಆದರೆ ಅವರ ಕಾಂಗ್ರೆಸ್ ಸೇರ್ಪಡೆಗೆ ಕಾಡುಗೊಲ್ಲ ಸಮುದಾಯದ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಸಮುದಾಯದ ನಾಯಕರನ್ನು ವಿಶ್ವಾಸಕ್ಕೆ ಪಡೆದುಕೊಳ್ಳದೆ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...