ಬೆಂಗಳೂರು: ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಸಮ್ಮತಿಸಿದ್ದಾರೆ.
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಭಾನುವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಪೂರ್ಣಿಮಾ ಶ್ರೀನಿವಾಸ್ ಚರ್ಚೆ ನಡೆಸಿದ್ದಾರೆ. ಸಿಎಂ ಹಾಗೂ ಡಿಸಿಎಂ ಅವರಿಂದ ಸೂಕ್ತ ಸ್ಥಾನಮಾನದ ಭರವಸೆ, ಸಕಾರಾತ್ಮಕ ಸ್ಪಂದನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಸೇರಲು ಪೂರ್ಣಿಮಾ ಶ್ರೀನಿವಾಸ್ ಸಮ್ಮತಿಸಿದ್ದು, ಅ. 20ರಂದು ಅವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಉದ್ದೇಶದಿಂದ ಕಾಂಗ್ರೆಸ್ ತಂತ್ರಗಾರಿಕೆ ರೂಪಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಮುಖಂಡರನ್ನು ಸೆಳೆಯತೊಡಗಿದ್ದು, ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯೂರು ಕ್ಷೇತ್ರ ಪ್ರತಿನಿಧಿಸಿದ್ದ ಪೂರ್ಣಿಮಾ ಶ್ರೀನಿವಾಸ್ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎನ್ನಲಾಗಿದೆ.