ಬೆಂಗಳೂರು: ರಾಜ್ಯದಲ್ಲಿ ಇಂತೂ 47,754 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 22,143 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 2,93,231 ಸಕ್ರಿಯ ಪ್ರಕರಣಗಳು ಇವೆ.
ಇಂದು 29 ಜನ ಸೋಂಕಿತರು ಮೃತಪಟ್ಟಿದ್ದಾರೆ. 2,58,290 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 18.48 ರಷ್ಟು ಇದೆ.
ರಾಜಧಾನಿ ಬೆಂಗಳೂರಿನಲ್ಲಿ 30,540 ಜನರಿಗೆ ಕೊರೊನಾ ಸೋಂಕು ತಗುಲಿದೆ. 2 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ. 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.