ಬೆಂಗಳೂರು: ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ, ಜೆಡಿಎಸ್ ಹಮ್ಮಿಕೊಂಡಿದ್ದ ಪಾದಯಾತ್ರೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ.
ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಪಾದಯಾತ್ರೆ ಮುಂದೂಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಂಸತ್ ಅಧಿವೇಶನದಲ್ಲಿ ಭಾಗ್ಯವಹಿಸಿದ್ದಾರೆ. ಹೀಗಾಗಿ ಪಾದಯಾತ್ರೆ ಮುಂದುವಡಲು ಮನವಿ ಮಾಡುವ ಬಗ್ಗೆ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಆದರೆ, ಇದರ ಹಿಂದೆ ರಾಜಕೀಯ ಲೆಕ್ಕಾಚಾರ ಕೂಡ ಇದೆ ಎಂದು ಹೇಳಲಾಗಿದೆ. ಜೆಡಿಎಸ್ ಪ್ರಾಬಲ್ಯದ ಹಳೆ ಮೈಸೂರು ಭಾಗದಲ್ಲಿ ಯಾತ್ರೆ ಸಾಗಲಿದೆ. ಪಾದಯಾತ್ರೆ ಬಿಜೆಪಿ ಲೀಡ್ ಮಾಡಿದ್ರೆ ಜೆಡಿಎಸ್ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ. ಸಂಸತ್ ಅಧಿವೇಶನದ ಕಾರಣ ಕುಮಾರಸ್ವಾಮಿ ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಆಗುವುದಿಲ್ಲ. ಕುಮಾರಸ್ವಾಮಿ ಇಲ್ಲದಿದ್ದರೆ ಉತ್ಸಾಹದ ಕೊರತೆ ಇರಲ್ಲ ಹೀಗಾಗಿ ಪಾದಯಾತ್ರೆ ಮುಂದೂಡುವ ಬಗ್ಗೆ ಚರ್ಚೆ ನಡೆಸಲಾಗಿದೆ.