ಬೆಂಗಳೂರು: ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಸೂದೆ ಮಂಡನೆ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯುವ ಸಾಧ್ಯತೆ ಇದೆ.
ಮಸೂದೆಯ ಅಂಶಗಳನ್ನು ಸರ್ಕಾರ ಪುನರ್ ಪರಿಶೀಲಿಸಲಿದೆ. ಸದ್ಯ ಸಂಪುಟದಲ್ಲಿ ಮಾತ್ರ ಕರಡು ಮಸೂದೆ ಅನುಮೋದನೆ ಪಡೆದುಕೊಂಡಿದೆ. ಪುನರ್ ಪರಿಶೀಲನೆಯ ನಂತರ ಸರ್ಕಾರ ಮಸೂದೆ ಮಂಡಿಸುವ ಸಾಧ್ಯತೆ ಇದೆ.
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರ ಭಾರಿ ಚರ್ಚೆಗಳಿಗೆ ಕಾರಣವಾಗಿದೆ. ಉದ್ಯಮಿಗಳು, ಖಾಸಗಿ ವಲಯದಿಂದ ವಿರೋಧ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಪುನರ್ ಪರಿಶೀಲನೆ ನಂತರ ಮಸೂದೆ ಮಂಡಿಸಲಾಗುವುದು ಎನ್ನಲಾಗಿದೆ.