ಮಹಾರಾಷ್ಟ್ರದ ಎನ್ ಸಿ ಪಿ ಮುಖಂಡ ಶರದ್ ಪವಾರ್ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಆರೋಪದಡಿ ಜೈಲು ಸೇರಿದ್ದ ನಟಿಗೆ ಜಾಮೀನು ಮಂಜೂರಾಗಿದೆ.
ಮರಾಠಿ ನಟಿ ಕೇತಕಿ ಚಿತಾಲೆಗೆ ಥಾಣೆ ನ್ಯಾಯಾಲಯ ಜಾಮೀನು ನೀಡಿದ್ದು, ಹೀಗಾಗಿ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಮೇ 14ರಂದು ನಟಿ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಿದ ಥಾಣೆ ಪೊಲೀಸರು ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಪೊಲೀಸ್ ವಿಚಾರಣೆ ವೇಳೆ ನನಗೆ ಕಿರುಕುಳ ನೀಡಲಾಗಿದೆ ಎಂದು ನಟಿ ಆರೋಪಿಸಿದ್ದರು.