ಭಾರತೀಯ ಅಂಚೆ ಇಲಾಖೆ ವತಿಯಿಂದ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ನೀಡಿದ್ದು, ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
10 ನೇ ತರಗತಿ ಪಾಸಾದ ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2582 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 11 ರವರೆಗೆ ಅವಕಾಶವಿದೆ. ಮಾಹಿತಿಗಾಗಿ appost.in ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.