ಕಲಬುರಗಿ: ಪೋಸ್ಟ್ ಆಫೀಸ್ ನಲ್ಲಿ ಡಿಜಿಟಲ್ ಉಳಿತಾಯ ಖಾತೆ ಹೊಂದಿದವರಿಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಣ ಹಾಕುತ್ತಾರೆ ಎನ್ನುವ ವದಂತಿ ನಂಬಿದ ಸಾವಿರಾರು ಜನ ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಗಿಬಿದ್ದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಸೂಪರ್ ಮಾರ್ಕೆಟ್ ನ ಬಹಮನಿ ಕೋಟೆ ಮಂದಿರುವ ಪ್ರಧಾನ ಅಂಚೆ ಕಚೇರಿಗೆ ಸೋಮವಾರ ಬೆಳಗ್ಗೆ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ನುಗ್ಗಿದ್ದು, ಉಳಿತಾಯ ಖಾತೆ ತೆರೆಯಲು ಮುಂದಾಗಿದ್ದಾರೆ. ಇದನ್ನು ಕಂಡು ಗಾಬರಿಯಾದ ಅಂಚೆ ಕಚೇರಿ ಸಿಬ್ಬಂದಿ ಖಾತೆ ತೆರೆಯಲು ಹರಸಹಾಸ ನಡೆಸಿದ್ದಾರೆ.
ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದಿರುವುದರಿಂದ ಮೋದಿ ಹಣ ಹಾಕುತ್ತಾರೆ. ರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವುದರಿಂದ ಸಿದ್ದರಾಮಯ್ಯ ಹಣ ಹಾಕುತ್ತಾರೆ ಎಂದು ವದಂತಿ ಹರಡಿದ್ದರಿಂದ ಜನ ಖಾತೆ ತೆರೆಯಲು ಮುಗಿಬಿದ್ದಿದ್ದರು ಎನ್ನಲಾಗಿದೆ.