ಪಶ್ಚಿಮ ಬಂಗಾಳ ಪೋಸ್ಟಲ್ ಸರ್ಕಲ್ ನಿಂದ 2357 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆಗಸ್ಟ್ 19 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಆಗಸ್ಟ್ 20, 2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
100 ರೂ. ಅರ್ಜಿ ಶುಲ್ಕವಿದ್ದು, ಆನ್ಲೈನ್ ಮೂಲಕ ಪಾವತಿಸಬೇಕಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://appost.in/gdsonline/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿ ಭರ್ತಿ ಮಾಡುವ ಮೂಲಕ ಆಗಸ್ಟ್ 19, 2021ರೊಳಗೆ ಅರ್ಜಿ ಸಲ್ಲಿಸಬಹುದು.