
ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಏಪ್ರಿಲ್ 28 ರಿಂದ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗಬೇಕಿತ್ತು. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ವಾರ್ಷಿಕ ಪರೀಕ್ಷೆ ಮುಗಿದ ನಂತರ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ.