ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪ್ರಥಮ ಪಿಯುಸಿ ಪರೀಕ್ಷೆ ಇಲ್ಲದೇ ಎಲ್ಲಾ ಮಕ್ಕಳನ್ನು ಪಾಸ್ ಮಾಡಲಾಗಿದೆ. ಕೊರೋನಾ ಸೋಂಕು ಭಾರೀ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಪಾಸ್ ಮಾಡಲಾಗಿದೆ. ಮುಂದೂಡಿಕೆಯಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುವ 15 ದಿನಗಳ ಮೊದಲು ಹೊಸ ದಿನಾಂಕ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.